ಅಕ್ಷರ ದಾಸೋಹ ಮಾಹಿತಿ

ಅಕ್ಷರ ದಾಸೋಹ ಯೋಜನೆ ಅನುಷ್ಠಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತುಗ್ಗಲದಿನ್ನಿ.

     ಶಾಲಾ ಹಂತದಲ್ಲಿ ಎಸ್.ಡಿ.ಎಂ.ಸಿ.,ಯವರು ಹಾಗೂ ಮುಖ್ಯ ಅಡುಗೆಯವರು ಕಾರ್ಯಕ್ರಮದ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರ್ಕಾರ  ನಿರ್ದೇಶನ ಹಾಗೂ ಮಾರ್ಗದರ್ಶಿ  ಸೂಚನೆಯಂತೆ ತಾಯಿಯಂದಿರ ಸಮಿತಿಯನ್ನು ಶಾಲೆಗಳಲ್ಲಿ ರಚಿಸಲಾಗಿದ್ದು, ಪ್ರತಿ ದಿನವೂ ಒಬ್ಬ  ವಿದ್ಯಾರ್ಥಿಯ ತಾಯಿ ಅಡುಗೆಯ ಮೇಲ್ವಿಚಾರಣೆ  ಹಾಗೂ ಊಟದ ರುಚಿ ನೋಡಿ ಬಡಿಸುವುದರಲ್ಲಿ  ಪಾಲ್ಗೊಳ್ಳುವುದರ ಮೂಲಕ ಮಕ್ಕಳು ತಮ್ಮ ಮನೆಯ ವಾತಾವರಣದಂತೆ  ಭಾವಿಸಿಕೊಂಡು ವರಾಂಡದಲ್ಲಿ/ಕೋಣೆಯಲ್ಲಿ ಕುಳ್ಳಿರಿಸಿ ಮುಖ್ಯ ಶಿಕ್ಷಕರು/ಶಿಕ್ಷಕರ ಉಸ್ತುವಾರಿ ಊಟ ನೀಡಲಾಗುತ್ತದೆ. ಊಟಕ್ಕೆ ಮುಂಚೆ ಶಿಕ್ಷಕರು ಕಡ್ಡಾಯವಾಗಿ  ರುಚಿ ನೋಡಿ, ರುಚಿ ಪುಸ್ತಕದಲ್ಲಿ ದಾಖಲಿಸಲಾಗುತ್ತಿದೆ. ಊಟಕ್ಕೆ ಮುಂಚೆ ಮತ್ತು ನಂತರ ಸೋಪು ಬಳಸಿ ಕೈ ತೊಳೆಯುವ ಉತ್ತಮ ಅಭ್ಯಾಸವನ್ನು ರೂಢಿಸಲಾಗಿದೆ. ಮುಖ್ಯ ಶಿಕ್ಷಕರು ಹಾಗೂ ತರಗತಿ ಶಿಕ್ಷಕರು/ದೈಹಿಕ ಶಿಕ್ಷಕರು /ಊಟದ ವೇಳೆಯಲ್ಲಿ ಕಡ್ಡಾಯವಾಗಿ ಊಟದ ವಿತರಣೆಯ ಉಸ್ತುವಾರಿ ವಹಿಸಿ, ಯಾವುದೇ ಸಮಸ್ಯೆಯಿಲ್ಲದಂತೆ ಮಕ್ಕಳು ಊಟ ಪಡೆಯುವಂತೆ ಕ್ರಮ ವಹಿಸುವುದು. ಅನುಪಯುಕ್ತ ಹಳೆಯ ವಸ್ತುಗಳನ್ನು ತೆಗೆದು ಹಾಕುವುದು. ಕಾರ್ಯಕ್ರಮದ ಬಗ್ಗೆ ನಿರಂತರ ಗಮನ ಹರಿಸುವುದು. ಅಡುಗೆಯವರು ಅಡುಗೆ ತಯಾರಿಸುವ ಹಾಗೂ ಬಡಿಸುವಾಗ ಏಪ್ರಾನ್ ಬಳಸುವುದು. ನೀರು ಹಾಗೂ ಆಹಾರ ಧಾನ್ಯ , ತರಕಾರಿಗಳ ಸ್ವಚ್ಛತೆ ಬಗ್ಗೆ ನಿಗಾ ವಹಿಸುವುದು. ಶಾಲಾ ಎಸ್.ಡಿ. ಎಂ.ಸಿ.,ಸಭೆಗಳಲ್ಲಿ ಅಕ್ಷರ ದಾಸೋಹ   ಕಾರ್ಯಕ್ರಮದ  ಸ್ವಚ್ಛತೆ ಬಗ್ಗೆ ಪರಿಶೀಲಿಸಿ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ವಿವರಗಳನ್ನು ದಾಖಲಿಸುತ್ತದೆ ಹಾಗೂ ಶಾಲೆಗೆ ಭೇಟಿ ನೀಡಿರುವ ಅಧಿಕಾರಿಗಳು ಕಡ್ಡಾಯವಾಗಿ ಮಧ್ಯಾಹ್ನ ಉಪಹಾರ ಯೋಜನೆಯ ಅನುಷ್ಠಾನದ ಬಗ್ಗೆ ಪರಿಶೀಲಿಸಿ ವರದಿಯಲ್ಲಿ ದಾಖಲು ಮಾಡುತ್ತಿದ್ದಾರೆ.


No comments:

Post a Comment

video lessons for S.S.L.C Students

S.S.L.C ವಿದ್ಯಾರ್ಥಿಗಳಿಗಾಗಿ ಇಂಗ್ಲೀಷ್ ವಿಷಯದ ಪಾಠಗಳ ವೀಡಿಯೋ ಪಾಠಗಳಿಗಾಗಿ ಈ ಲಿಂಕನ್ನು ಒತ್ತಿ